ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಹೊಳೆಹೊನ್ನೂರು: ಚಲಿಸುತ್ತಿದ್ದ ಬೈಕ್‌ಗೆ ಏಕಾಏಕಿ ಹಸು ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಬೈಕ್ ಅಪಘಾತಕ್ಕೀಡಾಗಿ ದಂಪತಿ (couple) ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ACCIDENT-NEWS-GENERAL-IMAGE.

ಡಿ.ಬಿ. ಹಳ್ಳಿ ಗ್ರಾಮದ ಸಂತೋಷ್ ಅವರು ತಮ್ಮ ಪತ್ನಿ ರೂಪ ಅವರನ್ನು ಬೈಕಿನ ಹಿಂಬದಿ ಸೀಟಿನಲ್ಲಿ ಕೂರಿಸಿಕೊಂಡು ಸಂಬಂಧಿಕರ ಮನೆಗೆ ಹೊರಟಿದ್ದರು. ಡಿ.ಬಿ. ಹಳ್ಳಿ ಕ್ರಾಸ್ ಬಳಿ ಬೈಕ್ ಬರುತ್ತಿದ್ದಾಗ ಹಸುವೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದಿದೆ. ಈ ವೇಳೆ ಬೈಕನ್ನು ನಿಯಂತ್ರಿಸಲು ಸಾಧ್ಯವಾಗದೆ ದಂಪತಿ ರಸ್ತೆಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ.

ACCIDENT-NEWS-GENERAL-IMAGE.

ಅಪಘಾತದಲ್ಲಿ ರೂಪ ಅವರ ಬಲಗೈ ಮೂಳೆ ಮುರಿದಿದ್ದು, ಮೈ-ಕೈ ಹಾಗೂ ಕಾಲುಗಳಿಗೆ ಪೆಟ್ಟು ಬಿದ್ದಿದೆ. ಸವಾರ ಸಂತೋಷ್ ಅವರಿಗೂ ಹೊಟ್ಟೆ ಹಾಗೂ ಸೊಂಟದ ಭಾಗಕ್ಕೆ ಒಳಪೆಟ್ಟುಗಳಾಗಿವೆ. ಗಾಯಾಳುಗಳನ್ನು ಶಿವಮೊಗ್ಗದ ಆರಾಧನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

Leave a Comment