ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜನನಿಬಿಡ ಪ್ರದೇಶ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಅಂಗಡಿಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು (Honda Activa) ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಧಿನಗರದ ನಿವಾಸಿ ಹಾಗೂ ಬಟ್ಟೆ ಅಂಗಡಿ ಮಾಲೀಕ ಸುನಿಲ್.ಆರ್.ಎಲ್. ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಕಳುವಾಗಿದೆ. ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಬಿಳಿ ಬಣ್ಣದ ಹೋಂಡಾ ಆಕ್ಟಿವಾ ವಾಹನದಲ್ಲಿ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತಮ್ಮ ಅಂಗಡಿಗೆ ಬಂದಿದ್ದರು. ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿ ಅಂಗಡಿಗೆ ಹೋಗಿದ್ದರು.
ಇದನ್ನೂ ಓದಿ – ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ
ಬೆಳಗ್ಗೆ 11 ಗಂಟೆಗೆ ವಾಪಸ್ ಬಂದು ನೋಡಿದಾಗ ಹೋಂಡಾ ಆಕ್ಟೀವಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಕಳ್ಳತನವಾದ ಸ್ಕೂಟರ್‌ನ ಮೌಲ್ಯ ₹25,000 ಎಂದು ಆಂದಾಜಿಸಲಾಗಿದೆ.

LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು














