ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ರಂಗಾಯಣವು (Rangayana) ಏಪ್ರಿಲ್ 14 ರಿಂದ ಮೇ 3 ರವರೆಗೆ ಆಯೋಜಿಸುತ್ತಿರುವ ‘ಚಿಣ್ಣರ ಸಿಹಿಮೊಗ್ಗೆ’ ಮಕ್ಕಳ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶನ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ – ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?
ಶಿಬಿರದಲ್ಲಿ ಮಕ್ಕಳಿಗೆ ರಂಗ ತರಬೇತಿ ಮತ್ತು ನಾಟಕ ನಿರ್ದೇಶನ ನೀಡಲು ರಂಗಭೂಮಿ ಹಿನ್ನೆಲೆಯುಳ್ಳ 6 ನಾಟಕ ನಿರ್ದೇಶಕರು ಹಾಗೂ 6 ಸಹಾಯಕ ನಿರ್ದೇಶಕರ ಆಯ್ಕೆಗಾಗಿ ಈ ಹಿಂದೆ ಅರ್ಜಿ ಆಹ್ವಾನಿಸಲಾಗಿತ್ತು. ಮಾರ್ಚ್ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಈ ಅವಧಿಯನ್ನು ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ಶಿವಮೊಗ್ಗ ರಂಗಾಯಣದ ಕಚೇರಿಯನ್ನು ಅಥವಾ ಈ ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು. ದೂರವಾಣಿ: 08182-256353, ಮೊಬೈಲ್: 7975229166 ಸಂಪರ್ಕಿಸಬಹುದು.

LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು














