ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಸರ್ಕಲ್ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ (Bike Stolen) ಆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ – ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

City-Center-Mall-Shimoga-City-Night-View.

ವಿದ್ಯಾನಗರದ ನಿವಾಸಿ ಪವನ್ ಎಂ.ಆರ್. ಎಂಬುವವರು ಕಳೆದ ಫೆಬ್ರವರಿ 24ರಂದು ರಾತ್ರಿ ಸುಮಾರು 8 ಗಂಟೆಯ ಹೊತ್ತಿಗೆ ತಮ್ಮ ಟಿವಿಎಸ್ ಅಪಾಚಿ ಬೈಕ್ ಅನ್ನು ಎ.ಎ. ಸರ್ಕಲ್ ಬಳಿಯ ಗ್ರಾಂಡ್ ಹೋಟೆಲ್ ಮುಂದೆ ನಿಲ್ಲಿಸಿದ್ದರು. ರಾತ್ರಿ 11:45ಕ್ಕೆ ವಾಪಸ್ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು.

ಕೂಡಲೇ ಪವನ್ ಅವರು ತಮ್ಮ ಸ್ನೇಹಿತರೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯಾನಗರದ ದುರ್ಗಾಂಬ ಜಾತ್ರೆ ಹಾಗೂ ವೈಯಕ್ತಿಕ ಕೆಲಸದಿಂದಾಗಿ ದೂರು ನೀಡಲು ತಡವಾಗಿದೆ ಎಂದು ಪವನ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

Leave a Comment