ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಜಾನುವಾರು ಮತ್ತು ದ್ವಿಚಕ್ರ ವಾಹನಗಳ ಕಳ್ಳತನ (thief) ಮಾಡುತ್ತಿದ್ದ ಆರೋಪಿಯನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನದಿಂದಾಗಿ 11 ಪ್ರಕರಣಗಳನ್ನು ಭೇದಿಸಿದಂತಾಗಿದೆ.

2025ರ ಸೆಪ್ಟೆಂಬರ್ 24ರಂದು ಹೊಸಸಿದ್ದಾಪುರ ಗ್ರಾಮದ ರಂಜಿತ್ ಎಂಬುವವರ ಕೊಟ್ಟಿಗೆಯಲ್ಲಿದ್ದ ಎರಡು ಹಸು ಹಾಗೂ ಒಂದು ಕರುವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

Youth-Involved-in-11-cases-arrested-by-Bhadravathi-Police

ವಿಶೇಷ ತಂಡವು ಭದ್ರಾವತಿಯ ಅಪ್ಪರ್ ಹುತ್ತಾ ನಿವಾಸಿ ದಿಲೀಪ ಅಲಿಯಾಸ್‌ ಕರಿಯ (20) ಎಂಬಾತನನ್ನು ಬಂಧಿಸಿದೆ. 5 ಜಾನುವಾರು ಕಳ್ಳತನ ಪ್ರಕರಣ, 4 ಬೈಕ್ ಕಳ್ಳತನ ಪ್ರಕರಣ, ಒಂದು ಕೊಲೆ ಯತ್ನ ಮತ್ತು ಹಲ್ಲೆ  ಪ್ರಕರಣಗಳು ಸೇರಿದಂತೆ ಒಟ್ಟು 11 ಪ್ರಕರಣಗಳು ಪತ್ತೆಯಾಗಿವೆ. ಆರೋಪಿಯಿಂದ ಅಂದಾಜು ₹95,500 ಮೌಲ್ಯದ 4 ದ್ವಿಚಕ್ರ ವಾಹನಗಳು ಹಾಗೂ ₹20,500 ನಗದು ಸೇರಿ ಒಟ್ಟು ₹1,16,000 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ – ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಡಿವೈಎಸ್‌ಪಿ ಪ್ರಕಾಶ್‌ ರಾಥೋಡ್‌, ಭದ್ರಾವತಿ ನಗರ ಇನ್ಸ್‌ಪೆಕ್ಟರ್‌ ಕೆ.ನಾಗಮ್ಮ ಮೇಲ್ವಿಚಾರಣೆಯಲ್ಲಿ, ನ್ಯೂಟೌನ್ ಪಿಎಸ್‌ಐ ಕವಿತಾ, ಸಿಬ್ಬಂದಿ ನವೀನ್.ಟಿ, ಆದರ್ಶ.ಆರ್, ಪ್ರಕಾಶ.ಜಿ.ಕೆ ಮತ್ತು ಪ್ರಸನ್ನ.ಹೆಚ್ ತಂಡದ ಆರೋಪಿಯನ್ನು ಬಂಧಿಸಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 24, 2026

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment