ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನ (Sahyadri Arts College) ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?
ಸಹ್ಯಾದ್ರಿ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ ಕಾರ್ಯಕರ್ತರು, ಅಂಕ ನೀಡುವ ಆಮಿಷವೊಡ್ಡಿ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿರುವುದು ಹಾಗೂ ಮೊಬೈಲ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿರುವ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಉಪನ್ಯಾಸಕನ ಈ ವರ್ತನೆಯಿಂದ ವಿದ್ಯಾರ್ಥಿನಿಯರು ತೀವ್ರ ಮಾನಸಿಕ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಆ ಉಪನ್ಯಾಸಕನ ವಿರುದ್ಧ ಕಠಿಣ ಕ್ರಮ ಜರುಗಿಸಿ, ಕೆಲಸದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ವಿಶ್ವವಿದ್ಯಾಲಯ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಎನ್.ಎಸ್.ಯು.ಐ ಕಾರ್ಯಕರ್ತರು ಎಚ್ಚರಿಸಿದರು.
NSUI ಜಿಲ್ಲಾಧ್ಯಕ್ಷ ವಿಜಯಕುಮಾರ್, ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್.ಎಸ್., ನಗರಾಧ್ಯಕ್ಷ ರವಿಕುಮಾರ್, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿದ್ದರು. ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ಸಿರಾಜ್ ಅಹಮದ್ ಅವರ ಮೂಲಕ ಕುಲಪತಿಗೆ ಮನವಿ ಪತ್ರ ರವಾನಿಸಲಾಯಿತು.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು














