ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಆನಂದಪುರ: ಸಾಗರ ತಾಲೂಕಿನ ಮಳ್ಳಾಕೊಪ್ಪ ಗ್ರಾಮದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಎಳೆಯುವ ಸಂಬಂಧ ಸರ್ವೇ ಕಾರ್ಯ ನಡೆಸುತ್ತಿದ್ದ ವೇಳೆ ಗುಂಪೊಂದು ಅಡ್ಡಿಪಡಿಸಿ, ಇಂಜಿನಿಯರ್‌ (Engineer) ಹಾಗೂ ಸರ್ವೇಯರ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ – ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

281123-Anandapura-Police-Station-Board.webp

ಹೈಟೆನ್ಷನ್ ವಿದ್ಯುತ್ ಲೈನ್ ಹಾದುಹೋಗುವ ಹಿನ್ನೆಲೆ, ಇಂಜಿನಿಯರ್‌ ಪರಶುರಾಮ್‌ ಮತ್ತು ಸರ್ವೇಯರ್ ಮಲ್ಲನಗೌಡ ಕೆಲಸ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಎಳು ಜನರ ಗುಂಪು ಸರ್ವೇಯರ್ ಮಲ್ಲನಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹೊಡೆದಿದ್ದಾರೆ. ಇದನ್ನು ಬಿಡಿಸಲು ಹೋದ ಇಂಜಿನಿಯರ್‌ ಪರಶುರಾಮ್‌ ಅವರ ಮೇಲೂ ಕೋಲು ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Sunrise Facility Services, Sri sai Trust Shimoga

Leave a Comment