ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಾರು ಟಚ್ ಆಗಿದೆ ಎಂಬ ಕಾರಣಕ್ಕೆ ನಡೆದ ಗಲಾಟೆಯಲ್ಲಿ ನಾಲ್ವರು ಅಪರಿಚಿತರು ಗುತ್ತಿಗೆದಾರರೊಬ್ಬರ (contractor) ಮೇಲೆ ಹಲ್ಲೆ ನಡೆಸಿದ್ದಾರೆ.

ನಗರದ ಜ್ಯೋತಿ ನಗರದ ನಿವಾಸಿ ಹಾಗೂ ಗುತ್ತಿಗೆದಾರ ಪ್ರಸನ್ನ (46) ಅವರು ಮಾರ್ಚ್ 24ರ ಸಂಜೆ ತಮ್ಮ ಸ್ಯಾಂಟ್ರೋ ಕಾರಿನಲ್ಲಿ ಕೆಲಸದ ನಿಮಿತ್ತ ತರಿಕೆರೆಗೆ ಹೋಗಿದ್ದರು. ಅಲ್ಲಿಂದ ವಾಪಸ್ ಬಿ.ಆರ್.ಪಿ ಮಾರ್ಗವಾಗಿ ಬರುತ್ತಿದ್ದಾಗ, ಲಕ್ಕಿನಕೊಪ್ಪ ಸರ್ಕಲ್ ಬಳಿ ಅವರ ಕಾರು ಮತ್ತೊಂದು ಕಾರಿಗೆ ತಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಸಿಗಂದೂರು ಲಾಂಚ್ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?
ಇದೇ ಕಾರಣಕ್ಕೆ ಕಾರಿನಲ್ಲಿದ್ದ ನಾಲ್ವರು ಅಪರಿಚಿತರು ಪ್ರಸನ್ನ ಅವರ ಕಾರನ್ನು ಬೆನ್ನಟ್ಟಿಕೊಂಡು ಬಂದಿದ್ದಾರೆ. ಶಿವಮೊಗ್ಗ – ಎನ್.ಆರ್.ಪುರ ರಸ್ತೆಯ ಕಾಚಿನಕಟ್ಟೆ ಗ್ರಾಮದ ವಿಮಾನ ನಿಲ್ದಾಣದ ಎದುರು ದೇವಸ್ಥಾನದ ಬಳಿ ರಾತ್ರಿ ಸುಮಾರು 9 ಗಂಟೆಗೆ ಪ್ರಸನ್ನ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ನಮ್ಮ ಕಾರಿಗೆ ಟಚ್ ಮಾಡಿದ್ದೀಯಾ ಎಂದು ಅಪರಿಚಿತರು ಗಲಾಟೆ ತೆಗೆದಿದ್ದಾರೆ.

ನಾಲ್ವರು ಪ್ರಸನ್ನ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಪ್ರಸನ್ನ ಅವರ ಮೂಗು, ತುಟಿ ಮತ್ತು ಹಣೆಗೆ ತೀವ್ರ ಗಾಯಗಳಾಗಿವೆ. ಸ್ಥಳೀಯರು ಬಂದಾಗ ಆರೋಪಿಗಳು ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು














