ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗ: ನಿರ್ಮಾಣ ಹಂತದಲ್ಲಿದ್ದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರುಪಾಯಿ ಮೌಲ್ಯದ ವೈರ್ (electrical wires) ಹಾಗೂ ಸಿಸಿ ಕ್ಯಾಮರಾಗಳನ್ನು ಕಳವು ಮಾಡಿದ್ದಾರೆ. ಈ ಕುರಿತು ಮನೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಇಂಜಿನೀಯರ್ ಚಂದನ್ ಎಂ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಬೊಮ್ಮನಕಟ್ಟೆಯ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಮನೆಯೊಂದರ ನಿರ್ಮಾಣ ಕಾರ್ಯ ಅಂತಿಮ ಹಂತಕ್ಕೆ ತಲುಪಿದೆ. ವೈರಿಂಗ್ ಕೆಲಸವು ಮುಗಿದಿತ್ತು. ಮಾರ್ಚ್ 22ರ ರಾತ್ರಿ ಕೆಲಸ ಮುಗಿಸಿ ಬೀಗ ಹಾಕಲಾಗಿತ್ತು. ಆದರೆ ಮಾರ್ಚ್ 23ರ ಬೆಳಗ್ಗೆ ಬಂದು ನೋಡಿದಾಗ, ಕಬ್ಬಿಣದ ಬಾಗಿಲ ಮೇಲಿಂದ ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಸುಮಾರು ₹1.18 ಲಕ್ಷ ಮೌಲ್ಯದ ವಸ್ತುಗಳನ್ನು ಆಯುಧದಿಂದ ಕಟ್ ಮಾಡಿ ಕಳವು ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಲಾಗಿದೆ.

Crime-News-General-Image

ಇದನ್ನೂ ಓದಿ – ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

Nanjappa Hospital Advertisement

1.5, 2.5 ಮತ್ತು 4.0 ಎಂಎಂ ಅಳತೆಯ ಒಟ್ಟು 34 ಬಂಡಲ್ ವೈರ್ ಬಾಕ್ಸ್‌ಗಳು, ಸ್ಟಾರ್ಟರ್ ವೈರ್ ಹಾಗೂ ಸ್ವಿಚ್‌ಗಳು ಕಳುವಾಗಿವೆ. ಇದರೊಂದಿಗೆ ಮನೆಯ ಹೊರಭಾಗದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಸಹ ಕಳ್ಳರು ಕದ್ದೊಯ್ದಿದ್ದಾರೆ. ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion

Leave a Comment