ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ (Sonia Gandhi) ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿ, ಶಿವಮೊಗ್ಗದ ಯುವ ಕಾಂಗ್ರೆಸ್ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಸೋನಿಯಾ ಗಾಂಧಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು, ಈ ದೇಶಕ್ಕೆ ಇನ್ನಷ್ಟು ಸೇವೆ ಮಾಡುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಹಾಪ್‌ಕಾಮ್ಸ್ ಅಧ್ಯಕ್ಷ ಆರ್. ವಿಜಯ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಚರಣ್, ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಗೌತಮ್, ಆಕಾಶ್, ಚಂದ್ರೋಜಿ ವಿಷ್ಣುಕುಮಾರ್, ಅಭಿಷೇಕ್, ಅನಂತ, ತೌಸಿಫ್, ಅಜಯ್, ಯೋಗೀಶ್, ರವಿ, ಸಂಕೇತ್, ಸಂಜಯ್, ಗುರುಪ್ರಸಾದ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು














