ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ (elections) ಈಗಿನಿಂದಲೆ ಸಜ್ಜಾಗಬೇಕು ಎಂದು ಶಾಸಕಿ ಶಾರದಾ ಪೂರಾ ನಾಯ್ಕ್ ತಿಳಿಸಿದರು.
ಜೆಡಿಎಸ್ ಕಚೇರಿಯಲ್ಲಿ ನಡೆದ ಗ್ರಾಮಾಂತರ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಶಾರದಾ ಪೂರ್ಯಾನಾಯ್ಕ್, ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಸದ್ಯದಲ್ಲೆ ಬರಲಿವೆ. ಸೆಪ್ಟೆಂಬರ್ ನಂತರ ಇದಕ್ಕೆ ಚಾಲನೆ ಸಿಗಬಹುದು. ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯುವುದು ಬಹಳ ಮುಖ್ಯ. ಭಿನ್ನಾಭಿಪ್ರಾಯ ಮರೆತು ಪಕ್ಷಕ್ಕಾಗಿ ದುಡಿಯಬೇಕಾದ ಸಂದರ್ಭ ಇದು ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಯಾರಿಗೇ ಟಿಕೇಟ್ ಕೊಟ್ಟರೂ ಅವರ ಗೆಲುವಿಗಾಗಿ ನಾವು ಶ್ರಮಿಸಬೇಕು. ವೈಯಕ್ತಿಕ ವಿಷಯಗಳನ್ನು ಬದಿಗಿಟ್ಟು ಪಕ್ಷವೇ ದೊಡ್ಡದು ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕು. ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ಈಗಿನಿಂದಲೇ ಸಜ್ಜಾಗಬೇಕು ಎಂದು ತಿಳಿಸಿದರು. ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ಸೋಮಿನಕೊಪ್ಪ ಕಾಂತರಾಜ್, ನರಸಿಂಹ ಗಂಧದಮನೆ, ಕಾಂತರಾಜು ಸೇರಿ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ
LATEST NEWS
- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

About The Editor
ನಿತಿನ್ ಆರ್.ಕೈದೊಟ್ಲು














