ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ತಾಲೂಕಿನ ನಗತಿಬೆಳಗಲು ತಾಂಡಾದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು (thieves) ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ನಡೆದಿದೆ. ಮನೆಯವರೆಲ್ಲ ಮದುವೆ ಸಮಾರಂಭಕ್ಕೆ ಹೋಗಿದ್ದ ಸಂದರ್ಭ ಈ ಕಳ್ಳತನ ನಡೆದಿದೆ.
ಹೇಗಾಯ್ತು ಘಟನೆ?
ಮಂಜುಳಾಬಾಯಿ ಅವರು ಮಾರ್ಚ್ 22ರಂದು ಮಗನೊಂದಿಗೆ ಚನ್ನಗಿರಿಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಾರ್ಚ್ 25ರಂದು ಮಧ್ಯಾಹ್ನ ಮನೆಗೆ ವಾಪಸ್ ಬಂದು ನೋಡಿದಾಗ, ಹಿಂಬಾಗಿಲಿನ ಚಿಲಕ ಮುರಿದಿರುವುದು ಕಂಡುಬಂದಿದೆ.

ಒಳಗೆ ಹೋಗಿ ಪರಿಶೀಲಿಸಿದಾಗ ಬೀರುವಿನಲ್ಲಿದ್ದ ಸುಮಾರು 25 ಗ್ರಾಂ ಚಿನ್ನದ ತಾಳಿ ಮತ್ತು ನೆಕ್ಲೇಸ್, 70 ಗ್ರಾಂ ಬೆಳ್ಳಿಯ ಕಾಲುಗೆಜ್ಜೆ ಹಾಗೂ ₹40,000 ನಗದು ಕಳುವಾಗಿರುವುದು ಬೆಳಕಿಗೆ ಬಂದಿದೆ. ಒಟ್ಟು 1.45 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಆರೋಪಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?
LATEST NEWS
- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

About The Editor
ನಿತಿನ್ ಆರ್.ಕೈದೊಟ್ಲು















