ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಸೊರಬ: ಪಟ್ಟಣದ ಮೀನು ಮಾರುಕಟ್ಟೆ (fish market) ಗೇಟ್ ಬಳಿ ಕಾರು ಅಡ್ಡಲಾಗಿ ನಿಲ್ಲಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಚಿಮನೂರು ಗ್ರಾಮದ ವಸಂತ್ ಹೆಚ್.ಸಿ. ಎಂಬುವವರು ಹಲ್ಲೆಗೊಳಗಾಗಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ – ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

Crime-News-General-Image

ವಸಂತ್ ಅವರು ತಮ್ಮ ಕಾರಿನಲ್ಲಿ ಮೀನು ಮಾರುಕಟ್ಟೆಗೆ ಹೋಗಿದ್ದಾಗ, ಸ್ವಿಫ್ಟ್ ಕಾರೊಂದು ರಸ್ತೆಗೆ ಅಡ್ಡಲಾಗಿ ನಿಂತಿತ್ತು. ತಮ್ಮ ಕಾರು ಹೋಗಲು ದಾರಿ ಮಾಡಿಕೊಡುವಂತೆ ಕೇಳಿದಾಗ, ಸ್ವಿಫ್ಟ್ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಕಾರಿನ ಬೀಗದಿಂದ ವಸಂತ್ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಕಾರಿನಲ್ಲಿದ್ದ ಮತ್ತಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ವಸಂತ್ ಅವರ ಅಂಗಿ ಹರಿದು ನೆಲಕ್ಕೆ ಬೀಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

Leave a Comment