ಶಿಕಾರಿಪುರ: ಪಟ್ಟಣದಲ್ಲಿ ವಿದ್ಯುತ್ ಲೈನ್ ದುರಸ್ತಿ ಕಾರ್ಯದ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೆಸ್ಕಾಂ ಲೈನ್ ಮ್ಯಾನ್ (lineman) ಹರೀಶ್ (45) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅದನ್ನು ಸರಿಪಡಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕೆಇಬಿ ಸಬ್ ಸ್ಟೇಶನ್ ಎದುರು ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಹರೀಶ್ ಅವರು ಮೃತಪಟ್ಟಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ಧರ್ಮಸ್ಥಳ ಭಾಗದಿಂದ ಶಿಕಾರಿಪುರಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದರು. ಘಟನೆ ಸಂಬಂಧ ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
