ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್‌ (Private Bus) ಚಾಲಕನ ನಿಯಂತ್ರಣ ತಪ್ಪಿ ಕಾಗೆಹಳ್ಳ ಸೇತುವೆಯಿಂದ ಹಾರಿದೆ. ಘಟನೆಯಲ್ಲಿ ಸುಮಾರು 30 ಪ್ರಯಾಣಿಕಗರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹೇಗಾಯ್ತು ಘಟನೆ?

ಖಾಸಗಿ ಬಸ್ಸು ಕಾಗೆಹಳ್ಳ ಸಮೀಪದ ಪೆಟ್ರೋಲ್‌ ಬಂಕ್‌ನಲ್ಲಿ ಇಂಧನ ಭರ್ತಿ ಮಾಡಿಕೊಂಡು ಭದ್ರಾವತಿ ಕಡೆಗೆ ತೆರಳುತಿತ್ತು. ವೀರಾಪುರ ಬಳಿ ಕಾಗೆಹಳ್ಳದ ಸೇತುವೆಯಿಂದ ಕೆಳಗೆ ಹಾರಿದೆ. ಬಸ್ಸಿನಲ್ಲಿದ್ದ ಮಕ್ಕಳು, ಮಹಿಳೆಯರು, ವೃದ್ಧರು ಸೇರಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೆ ಭದ್ರಾವತಿ ಮತ್ತು ಶಿವಮೊಗ್ಗದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

Private-Bus-jumps-from-the-bridge.

‘ಅತಿ ವೇಗವೇ ಘಟನೆಗೆ ಕಾರಣ’

ಇನ್ನು, ಬಸ್‌ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಚನ್ನಗಿರಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ನೊಂದಿಗೆ ಸ್ಪರ್ಧೆಗೆ ಬಿದ್ದಂತೆ ಬಸ್‌ ಚಲಾಯಿಸಿದ್ದರು. ಅದೃಷ್ಟವಶಾತ್‌ ಅಲ್ಲಿ ಯಾವುದೇ ಅವಘಡ ಸಂಭವಿಸಿರಲಿಲ್ಲ. ಚನ್ನಗಿರಿಯಿಂದ ಬರುವಾಗಲು ಬಸ್ಸು ವೇಗವಾಗಿಯೇ ಸಾಗಿತ್ತು. ಪೆಟ್ರೋಲ್‌ ಬಂಕ್‌ಗೆ ಹೋಗಿ ಅಲ್ಲಿಂದ ಹೊರಟಾಗ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಘಟನೆಯ ಬಳಿಕ ಚಾಲಕ, ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 30, 2026

Bus falls off bridge near Bhadravathi, 30 injured

Bus falls off bridge near Bhadravathi, 30 injured

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

Leave a Comment