ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸೊರಬ: ತಾಲೂಕಿನಲ್ಲಿ ಬೇಸಿಗೆಯಲ್ಲಿ ಸಾಮಾನ್ಯವಾಗಿ ಸಂಭವಿಸುವ ಬೆಂಕಿ ಅವಘಡಗಳಿಂದ ಹೆಚ್ಚು ಹಾನಿಯಗುವುದನ್ನು ತಡೆಗಟ್ಟಲು ಅಗ್ನಿ ಶಾಮಕ ಠಾಣೆಗೆ ವಾಹನಗಳು (vehicles) ಅಗತ್ಯವಾಗಿರುವುದನ್ನು ಮನಗಂಡು ಹೊಸ ಜಲವಾಹನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಸೊರಬ ಪೊಲೀಸ್, ಪಶು ಸಂಗೋಪನಾ ಹಾಗೂ ಅಗ್ನಿಶಾಮಕ ಠಾಣೆಗೆ ನೂತನ ವಾಹನಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

ಬೇಡಿಕೆಯಂತೆ ಪಶು ಸಂಗೋಪನೆ ಇಲಾಖೆಗೆ, ಅಗ್ನಿಶಾಮಕ ಹಾಗೂ ಪೋಲೀಸ್ ಇಲಾಖೆಗೆ ಅಗತ್ಯವಿರುವ ವಾಹನಗಳನ್ನು ವಿತರಿಸಲಾಗಿದೆ. ಕ್ಷೇತ್ರದಲ್ಲಿ ರಸ್ತೆ, ಶಾಲೆ ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಇದನ್ನೂ ಓದಿ – ಸ್ಕೀಮ್ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್
ಈಗಾಗಲೇ ತಾಲೂಕಿನಲ್ಲಿ 162 ವಿವಿಧ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು. ಜತೆಗೆ ಇಲ್ಲಿಯವರೆಗೆ ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ 400 ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಲಾಗಿದೆ ಎಂದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ತಹಸೀಲ್ದಾರ್ ಪುರಂದರ, ಡಿವೈಎಸ್‌ಪಿ ಇ.ಕೇಶವ, ಸಿಪಿಐ ಮಹಾಂತೇಶ್ ಲಂಬಿ, ಪಿಎಸ್‌ಐಗಳಾದ ನವೀನ್, ಚಂದನ್, ಮುದುಕಮ್ಮನವರ್, ಅಗ್ನಿಶಾಮಕ ದಳ ಠಾಣಾಧಿಕಾರಿ ಮಹಾಬಲೇಶ್ವರ ನಾಯ್ಕ, ತಾ.ಪಂ ಇಒ ಕೆ.ಜಿ.ಶಶಿಧರ್ ಸೇರಿ ಹಲವರು ಇದ್ದರು.

LATEST NEWS
- ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

- ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

- ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

- 6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

- ₹50 ಪೆಟ್ರೋಲ್ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್

About The Editor
ನಿತಿನ್ ಆರ್.ಕೈದೊಟ್ಲು












