ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯ ಶಂಕರಘಟ್ಟದ ದೀನಬಂಧು ಸೇವಾ ಟ್ರಸ್ಟ್‌ನ 25ನೇ ವರ್ಷದ ಬೆಳ್ಳಿ ಹಬ್ಬವನ್ನು ಮಾ.31ರ ಸಂಜೆ 4 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ (Award) ಎಂದು ಟ್ರಸ್ಟ್‌ನ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಜಿ. ಶಂಕರ್ ಅವರಿಗೆ ದೀನಬಂಧು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಭೋಜ್ಯಾನಾಯ್ಕ ಹಾಗೂ ಶಿಕ್ಷಣ ತಜ್ಞ ಜೆ.ಎಲ್. ಪದ್ಮನಾಭ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ : ಸ್ಕೀಮ್ ಹೆಸರಲ್ಲಿ ಸಾವಿರಾರು ಜನರಿಗೆ ವಂಚನೆ ಆರೋಪ, ಉಡುಪಿಯ ವ್ಯಕ್ತಿ ಅರೆಸ್ಟ್
ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮುಖಂಡರು ಮತ್ತು ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ. ಸಮಾರಂಭದ ನಂತರ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಟ್ರಸ್ಟಿಗಳಾದ ಶೇಖರ್, ಕಾಂಗ್ರೆಸ್ ಜಿಲ್ಲಾ ಘಟಕದ ವಕ್ತಾರ ಜಿ.ಡಿ.ಮಂಜುನಾಥ್, ಹಸೀನಾ, ಯು.ಶಿವಾನಂದ, ಎಂ.ಎಂ. ಸ್ವಾಮಿ, ಪ್ರಸನ್ನ, ಮಂಜುನಾಥ್, ಎಂ. ಸಿದ್ದರಾಮು ಇದ್ದರು.

LATEST NEWS
- ಜಯನಗರ ಪೊಲೀಸ್ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

- ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 31 ಮಾರ್ಚ್ 2026

- ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

- ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

- ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

About The Editor
ನಿತಿನ್ ಆರ್.ಕೈದೊಟ್ಲು













