₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಭದ್ರಾವತಿ: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದಿದ್ದನ್ನು ಪ್ರಶ್ನಿಸಿದ ಪೆಟ್ರೋಲ್ ಬಂಕ್ (petrol bunk) ಸಿಬ್ಬಂದಿ ಹಾಗೂ ಮಾಲೀಕರ ಮೇಲೆ ಕಿಡಿಗೇಡಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಬಂಕ್‌ನಲ್ಲಿದ್ದ ಉಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ತಾಲೂಕಿನ ಕುಡ್ಲಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ.

ಬಂಕ್ ಸಿಬ್ಬಂದಿ ಶ್ರೇಯಸ್ ಎನ್. ಅವರು ನೀಡಿದ ದೂರಿನ ಪ್ರಕಾರ, ಬೈಕ್‌ನಲ್ಲಿ ಇಬ್ಬರು ಯುವಕರು ಬಂಕ್‌ಗೆ ಬಂದು ₹50 ಪೆಟ್ರೋಲ್‌ ಹಾಕಿಸಿಕೊಂಡಿದ್ದಾರೆ. ಹಣ ಕೇಳಿದಾಗ ಕೊಡುವುದಿಲ್ಲ ಲೆಕ್ಕಕ್ಕೆ ಬರೆದಿಕೊ ಎಂದು ಹೇಳಿದ್ದಾರೆ. ಈ ಸಂಬಂಧ ಸಿಬ್ಬಂದಿ ಶ್ರೇಯಸ್‌, ಬಂಕ್‌ ಮಾಲೀಕ ಶ್ರೀನಿವಾಸ್‌ ಅವರಿಗೆ ವಿಷಯ ತಿಳಿಸಿದ್ದಾರೆ. ಹಣ ನೀಡುವಂತೆ ಬಂಕ್‌ ಮಾಲೀಕ ಶ್ರೀನಿವಸ್‌ ಕೇಳಿದ್ದರೆ. ಸಿಟ್ಟಿಗೆದ್ದ ಯುವಕರು ಅಲ್ಲಿಂದ ತೆರಳಿದ್ದು 25 ಜನರ ಗುಂಪನ್ನು ಬಂಕ್‌ಗೆ ಕರೆತಂದು ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Crime-News-General-Image

ಈ ವೇಳೆ ಶ್ರೇಯಸ್ ಹಾಗೂ ಬಂಕ್ ಮಾಲೀಕ ಶ್ರೀನಿವಾಸ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ. ಆರೋಪಿಗಳು ಶ್ರೇಯಸ್ ಬಳಿಯಿದ್ದ ₹500 ನಗದು ಕಿತ್ತುಕೊಂಡು, ಪೆಟ್ರೋಲ್ ಹಾಕುವ ಗನ್ ಮುರಿದು ಹಾಗೂ ಸಿಸಿಟಿವಿ ಕೇಬಲ್‌ಗಳನ್ನು ಎಳೆದು ಹಾಕಿ ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ : ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

ಗಾಯಾಳುಗಳು ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

Leave a Comment