ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಹಾಗೂ ದೀರ್ಘಕಾಲದಿಂದ ವಾರಸುದಾರರು ಪತ್ತೆಯಾಗದ ಒಟ್ಟು 8 ವಾಹನಗಳನ್ನು ಏಪ್ರಿಲ್ 6 ರಂದು ಬಹಿರಂಗ ಹರಾಜು (public auction) ಹಾಕಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗದ 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಈ ವಾಹನಗಳ ವಿಲೇವಾರಿಗೆ ಆದೇಶ ನೀಡಿದ್ದು, ಅದರನ್ವಯ ಈ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಹರಾಜಿನಲ್ಲಿ ಇರಿಸಲಾಗಿರುವ ಎಂಟು ವಿವಿಧ ಮಾದರಿಯ ವಾಹನಗಳನ್ನು ಅವುಗಳ ಪ್ರಸ್ತುತ ಸ್ಥಿತಿಯಲ್ಲಿಯೇ ಹರಾಜು ಮಾಡಲಾಗುತ್ತದೆ. ಬಹಿರಂಗ ಹರಾಜು ಪ್ರಕ್ರಿಯೆಯು ಏಪ್ರಿಲ್ 6 ರಂದು ಬೆಳಗ್ಗೆ 10 ಗಂಟೆಗೆ ಜಯನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಡೆಯಲಿದೆ. ಆಸಕ್ತ ಸಾರ್ವಜನಿಕರು ನಿಗದಿತ ಸಮಯದಲ್ಲಿ ಠಾಣೆಗೆ ಭೇಟಿ ನೀಡಿ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


LATEST NEWS
- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

- ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

- ಕೇಕ್, ಬಿಸ್ಕತ್ತು, ಕುಕೀಸ್ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

About The Editor
ನಿತಿನ್ ಆರ್.ಕೈದೊಟ್ಲು














