ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಭಾರತದ ಜನಗಣತಿ-2027ರ (census 2027) ಪೂರ್ವಭಾವಿಯಾಗಿ ಮೊದಲ ಹಂತದ ಮನೆಗಳ ಪಟ್ಟಿ ಮತ್ತು ಮನೆ ಗಣತಿ ಪ್ರಕ್ರಿಯೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಏಪ್ರಿಲ್ 16 ರಿಂದ ಮೇ 15 ರವರೆಗೆ ಗಣಿತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.
ಒಟ್ಟು 30 ದಿನಗಳ ಕಾಲ ನಡೆಯುವ ಈ ಗಣತಿಯಲ್ಲಿ ಪ್ರತಿಯೊಂದು ಮನೆಯ ಸ್ಥಿತಿಗತಿ, ಲಭ್ಯವಿರುವ ಮೂಲಭೂತ ಸೌಕರ್ಯಗಳು ಹಾಗೂ ಆಸ್ತಿಪಾಸ್ತಿಗಳ ಕುರಿತಾದ ನಿಖರ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಸ್ವಯಂ ಗಣತಿ ಮಾಡಿಕೊಳ್ಳಲು ಕೂಡ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಯಂ ಗಣತಿ ಮಾಡುವುದು ಹೇಗೆ?
ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ಸಾರ್ವಜನಿಕರು ಆನ್‌ಲೈನ್ ಮೂಲಕವೇ ತಮ್ಮ ಮಾಹಿತಿಯನ್ನು ದಾಖಲಿಸಬಹುದು.
- ಅಧಿಕೃತ ಪೋರ್ಟಲ್ https://se.census.gov.in ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗಬೇಕು.
- ನಕ್ಷೆಯಲ್ಲಿ ನಿಮ್ಮ ಮನೆಯ ಸ್ಥಳವನ್ನು ಗುರುತಿಸಿ, ಅಗತ್ಯ ಮಾಹಿತಿ ಭರ್ತಿ ಮಾಡಿ ಸಬ್ಮಿಟ್ ಮಾಡುವುದು.
- ಸಲ್ಲಿಕೆಯ ನಂತರ ಲಭಿಸುವ SE ID ಅನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಗಣತಿದಾರರು ಮನೆಗೆ ಬಂದಾಗ ಈ ಐಡಿಯನ್ನು ತೋರಿಸಿ ದತ್ತಾಂಶ ಪರಿಶೀಲಿಸಿಕೊಳ್ಳಬಹುದು.
ಇದನ್ನೂ ಓದಿ : ಕೇಕ್, ಬಿಸ್ಕತ್ತು, ಕುಕೀಸ್ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ
ಏಪ್ರಿಲ್ 16 ರಿಂದ ಮೇ 15 ರವರೆಗೆ ಗಣತಿದಾರರು ಮತ್ತು ಮೇಲ್ವಿಚಾರಕರು ಪ್ರತಿ ಮನೆಗೆ ಭೇಟಿ ನೀಡಲಿದ್ದಾರೆ. ಸ್ವಯಂ ಗಣತಿ ಮಾಡದವರ ಮಾಹಿತಿಯನ್ನು ಗಣತಿದಾರರೇ ಸ್ಥಳದಲ್ಲಿ ಸಂಗ್ರಹಿಸುತ್ತಾರೆ. ಸಾರ್ವಜನಿಕರು ಈ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ. ಹೆಚ್ಚಿನ ಮಾಹಿತಿಗೆ ಸ್ಥಳೀಯ ತಾಲೂಕು ಆಡಳಿತ, ಸ್ಥಳೀಯ ಸಂಸ್ಥೆ, ಜಿಲ್ಲಾಡಳಿತ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

LATEST NEWS
- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

- ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

About The Editor
ನಿತಿನ್ ಆರ್.ಕೈದೊಟ್ಲು















