ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗ: ರಾಮೇನಕೊಪ್ಪ ಗ್ರಾಮದ ನಿವಾಸಿಗಳಿಗೆ ತಕ್ಷಣ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ (protesting) ನಡೆಸಲಾಯಿತು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಗರದ ನೆಹರೂ ರಸ್ತೆಯಲ್ಲಿರುವ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Ramenakoppa-Villagers-protest-in-front-of-Minister-Office-in-Shimoga-city

ಇದನ್ನೂ ಓದಿ : ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ರಾಮೇನಕೊಪ್ಪದ ಗ್ರಾಮಠಾಣಾ ಜಾಗದಲ್ಲಿ ಹಲವು ವರ್ಷಗಳಿಂದ ವೃದ್ಧರು ಹಾಗೂ ಬಡ ಕಾರ್ಮಿಕರು ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಇಲ್ಲಿನ ನಿವಾಸಿಗಳಿಗೆ ಕುಡಿಯುವ ನೀರು, ವಿದ್ಯುತ್ ಮತ್ತು ರಸ್ತೆ ಸೇರಿ ಮೂಲಸೌಕರ್ಯ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ವಾಟಾಳ್ ಮಂಜುನಾಥ್ ದೂರಿದರು.

Ramenakoppa-Villagers-protesting-in-front-of-Minister-Office-in-Shimoga-city

ಈ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರಿಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಸಮಸ್ಯೆ ವಿವರಿಸಿದಾಗ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ಈ ಉದಾಸೀನತೆ ಹಾಗೂ ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿ ಈ ಹೋರಾಟ ರೂಪಿಸಲಾಗಿದೆ ಎಂದು ಅವರು ತಿಳಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಪ್ರವೀಣ್, ಸತೀಶ್‌ಗೌಡ, ಮಾರುತಿ, ಮಂಜು ಸೇರಿದಂತೆ ರಾಮೇನಕೊಪ್ಪ ಗ್ರಾಮದ ನಿವಾಸಿಗಳು ಪಾಲ್ಗೊಂಡಿದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment