ಶಿವಮೊಗ್ಗ: ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ (fertilizer) ಖರೀದಿಗೆ ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ.
2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ ಅವರ ಜಮೀನಿನ ವಿಸ್ತೀರ್ಣ ಮತ್ತು ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ರಸಗೊಬ್ಬರ ಅಗತ್ಯವಿದೆಯೋ ಅಷ್ಟನ್ನು ಮಾತ್ರ ಕೆ-ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು.


ಇದನ್ನೂ ಓದಿ : ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ
ಇದುವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ತಕ್ಷಣವೇ ತಮ್ಮ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು. ಈಗಾಗಲೇ ಎಫ್‌ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೇ ನಂಬರ್‌ಅನ್ನು ಅದಕ್ಕೆ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.