ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ (LPG) ಮತ್ತು ಸಿಎನ್‌ಜಿ (CNG) ಬಂಕ್‌ಗಳಲ್ಲಿ (bunk owners) ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಪ್ರತಿಯೊಂದು ಬಂಕ್‌ನಲ್ಲೂ ತೈಲ ಕಂಪನಿಗಳು ಅಥವಾ ಖಾಸಗಿ ಸಂಸ್ಥೆಗಳು ನಿಗದಿಪಡಿಸಿದ ಇಂಧನ ದರದ ವಿವರಗಳನ್ನು ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಕಡ್ಡಾಯವಾಗಿ ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ವಸೂಲಿ ಮಾಡಬಾರದು ಎಂದು ಅವರು ಸೂಚಿಸಿದ್ದಾರೆ.

CNG-bunk-at-Shimoga-NT-Road

CNG-bunk-at-Shimoga-NT-Road

ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955, ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ಮೋಟಾರು ವಾಹನಗಳಲ್ಲಿ ಬಳಕೆಯ ನಿಯಂತ್ರಣ) ಆದೇಶ-2001ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಇಂತಹ ಉಲ್ಲಂಘನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ದೂರು ನೀಡಬಹುದಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ : ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

Leave a Comment