ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಯಾವುದೆ ಮುನ್ಸೂಚನೆ ನೀಡದೆ ಗ್ರಾಹಕರೊಬ್ಬರ ಒಡಿ ಖಾತೆಯಿಂದ ಲಕ್ಷಾಂತರ ರೂ. ಕಡಿತಗೊಳಿಸಿ, ಸೇವಾ ನ್ಯೂನತೆ ಎಸಗಿದ ಹೊಸನಗರದ ಕೆನರಾ ಬ್ಯಾಂಕ್ (Canara Bank) ಶಾಖೆಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶಿಸಿದೆ.

Shivamogga-Live-Number-1-Website

ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ನಿವಾಸಿ ಎಂ.ವಿ. ಧನಂಜಯ, ಕೆನರಾ ಬ್ಯಾಂಕ್‌ನಲ್ಲಿ ₹2.80 ಲಕ್ಷ ಮಿತಿಯ ಒಡಿ ಸೌಲಭ್ಯ ಹೊಂದಿದ್ದರು. 2024ರ ಜೂನ್‌ನಲ್ಲಿ ಬ್ಯಾಂಕ್ ಯಾವುದೆ ನೋಟಿಸ್ ನೀಡದೆ ಖಾತೆಯಿಂದ ₹3,89,544 ಹಣ ಕಡಿತಗೊಳಿಸಿತ್ತು. ಹಣ ವಾಪಸ್ ನೀಡುವಂತೆ ಮನವಿ ಮಾಡಿದ್ದರೂ, ಬ್ಯಾಂಕ್ ವ್ಯವಸ್ಥಾಪಕರು ಹಣ ಹಿಂದಿರು ಗಿಸದ ಹಿನ್ನೆಲೆಯಲ್ಲಿ ಧನಂಜಯ ಹೊಸನಗರ ಕೆನರಾ ಬ್ಯಾಂಕ್ ವಿರುದ್ಧ ಸೇವಾನ್ಯೂನತೆ ಕುರಿತು ಆಯೋಗಕ್ಕೆ ದೂರು ನೀಡಿದ್ದರು.

Shimoga-Consumer-Court.

ಎಂ.ವಿ.ಧನಂಜಯ ಹಾಗೂ ಹೊಸನಗರ ಕೆನರಾ ಬ್ಯಾಂಕ್ ಸಲ್ಲಿಸಿದ ದಾಖಲೆ ಹಾಗೂ ವಾದ ಆಲಿಸಿದ ಆಯೋಗ, ಕಡಿತಗೊಳಿಸಿದ ₹3,89,554 ಮೊತ್ತಕ್ಕೆ ಶೇ.9ರ ಬಡ್ಡಿ ಸೇರಿಸಿ ಗ್ರಾಹಕರಿಗೆ ಮರಳಿಸಬೇಕು. ಗ್ರಾಹಕರಿಗೆ ಆಗಿರುವ ಮಾನಸಿಕ ವೇದನೆಗೆ ₹1 ಲಕ್ಷ ಮತ್ತು ಕಾನೂನು ಹೋರಾಟದ ವೆಚ್ಚವಾಗಿ ₹10 ಸಾವಿರಗಳನ್ನು ಆದೇಶದ 45 ದಿನಗಳ ಒಳಗೆ ನೀಡಬೇಕು ಎಂದು ಆಯೋಗದ ಅಧ್ಯಕ್ಷ ಟಿ. ಶಿವಣ್ಣ ಮತ್ತು ಸದಸ್ಯ ಬಿ.ಡಿ. ಯೋಗಾನಂದ ಬಾಂಡ್ಯ ಅವರ ಪೀಠ ಆದೇಶಿಸಿದೆ. ಈ ಕುರಿತು ಆಯೋಗದ ಸಹಾಯಕ ರಿಜಿಸ್ಟ್ರಾರ್ ಎಂ.ಟಿ.ಗಂಗಾಧರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್‌ಕಾರ್ಟ್‌ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

Leave a Comment