ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಆಶ್ರಯ ಬಡಾವಣೆಯಲ್ಲಿ ಕೃಷಿಕ ಸಮಾಜದ ಭವನ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಭೂಮಿ ಪೂಜೆ (Bhoomi Puja) ನೆರವೇರಿಸಿದರು. ನಂತರ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ಮಿನಿಸ್ಟರ್ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್
1 ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕೃಷಿ ಭವನ ನಿರ್ಮಾಣ ಮಾಡಬೇಕಿದೆ. ರೈತರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು.2 ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದ್ದರಿಂದ ರೈತ ಸಮುದಾಯ ಆರ್ಥಿಕವಾಗಿ ಬಲಿಷ್ಠವಾಗಿದೆ. ಅನ್ನ ನೀಡುವ ರೈತ ವರ್ಗವನ್ನು ಸ್ಮರಿಸುವ ನಿಟ್ಟಿನಲ್ಲಿ ಕೃಷಿ ಭವನ ನಿರ್ಮಾಣ ಮಾಡುತ್ತಿರುವುದು ಸೂಕ್ತವಾಗಿದೆ.
ಇದನ್ನೂ ಓದಿ : ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಮಧು ಬಂಗಾರಪ್ಪ ಭೇಟಿ
ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹದೇವಪ್ಪ, ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎನ್. ನಾಗರಾಜ್, ಕೃಷಿಕ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಟಿ.ಬಿ. ಸುರೇಶ್, ಪ್ರಧಾನ ಕಾರ್ಯದರ್ಶಿ ಶಾಂತಮ್ಮ ಜಯಮಾಲಾ, ವಿರೂಪಾಕ್ಷ, ಅಣ್ಣಪ್ಪ, ಶ್ರೀಧರ್, ದಯಾನಂದಗೌಡ, ಚಿಕ್ಕಸವಿ ನಾಗರಾಜ್, ಕೆ.ಪಿ.ರುದ್ರೇಗೌಡ, ತಹಶೀಲ್ದಾರ್ ಪುರಂದರ, ಗಂಗಾಧರಗೌಡ, ಶಿವಕುಮಾರ್, ಗಣಪತಿ ಹುಲ್ತಿಕೊಪ್ಪ, ಶಶಿಕಾಂತಗೌಡ, ಉಮೇಶ್ ಪಾಟೀಲ್, ರೇವಣಪ್ಪ ಸೇರಿದಂತೆ ಇತರರಿದ್ದರು.
ಇದನ್ನೂ ಓದಿ : ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು











