ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾಲೂಕಿನ ಗಾಜನೂರಿನ ತುಂತುರು ರೆಸಾರ್ಟ್‌ನಲ್ಲಿ (Resort) ಮದುವೆ ಸಮಾರಂಭದ ವೇಳೆ ವಿದ್ಯುತ್ ಪ್ರವಹಿಸಿ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿ ಪ್ರಕರಣ ಸಂಬಂಧ ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅಬ್ಬಲಗೆರೆಯ ಜನತಾ ಕಾಲೋನಿ ನಿವಾಸಿ ನಾಗಮ್ಮ (45) ಮೃತ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂವರ ವಿರುದ್ಧ ಪ್ರಕರಣ
ಕಳೆದ ಸೋಮವಾರ ರೆಸಾರ್ಟ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ನಾಗಮ್ಮ ಅವರು ಅಡುಗೆ ಬಡಿಸುವ ಮತ್ತು ಶುಚಿಗೊಳಿಸುವ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಸ್ಟೇಜ್ ಅಲಂಕಾರ ಮತ್ತು ಲೈಟಿಂಗ್ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯದಿಂದಾಗಿ ಹರಿದ ವಿದ್ಯುತ್, ರೆಸಾರ್ಟ್‌ನ ಮುಳ್ಳುತಂತಿ ಬೇಲಿಗೆ ಪ್ರವಹಿಸಿತ್ತು. ಕೆಲಸ ಮಾಡುತ್ತಿದ್ದ ನಾಗಮ್ಮ ಅವರು ಆಕಸ್ಮಿಕವಾಗಿ ಮುಳ್ಳುತಂತಿ ಮುಟ್ಟಿದಾಗ ತೀವ್ರವಾಗಿ ವಿದ್ಯುತ್ ಶಾಕ್ ತಗುಲಿದೆ.

ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರೆಸಾರ್ಟ್ ಮಾಲೀಕರು ಮತ್ತು ಅಲಂಕಾರಿಕ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ನಾಗಮ್ಮ ಅವರ ಅಳಿಯ ನಿಶ್ವಲ್ ದೂರು ನೀಡಿದ್ದಾರೆ. ಸುರಕ್ಷತಾ ಕ್ರಮ ಕೈಗೊಳ್ಳದ ಹಿನ್ನೆಲೆ ರೆಸಾರ್ಟ್ ಮಾಲೀಕ, ಲೈಟಿಂಗ್ ಮತ್ತು ಸ್ಟೇಜ್ ಡೆಕೋರೇಷನ್ ಕೆಲಸಗಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ : ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

LATEST NEWS
- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

About The Editor
ನಿತಿನ್ ಆರ್.ಕೈದೊಟ್ಲು











