ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಬೈಕ್‌ಗೆ (bike accident) ಕಾಡುಪ್ರಾಣಿಯೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿ ಬಿದ್ದಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಲ್ಲೂರು ಗ್ರಾಮದ ನಿವಾಸಿ ಮಲ್ಲೇಶಪ್ಪ (55) ಮೃತಪಟ್ಟವರು. ಕವಡಿ ಗ್ರಾಮದ ಸಮೀಪದ ಮಾವಿನ ಕೊಪ್ಪಲಿನಲ್ಲಿ ಈ ಅಪಘಾತ ಸಂಭವಿಸಿದೆ.
ಮಾರ್ಚ್ 29ರಂದು ರಾತ್ರಿ ಮಲ್ಲೇಶಪ್ಪ ಅವರು ಅಳಿಯ ವೀರೆಶ್ ಅವರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ದಿಢೀರನೆ ಕಾಡುಪ್ರಾಣಿ ಅಡ್ಡಬಂದಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ. ಅಪಘಾತದಲ್ಲಿ ಮಲ್ಲೇಶಪ್ಪ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅಳಿಯ ವೀರೆಶ್ ಅವರಿಗೂ ಗಾಯಗಳಾಗಿದ್ದವು.
ಇದನ್ನೂ ಓದಿ : ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್, ನಿಯಮ ಉಲ್ಲಂಘನೆಗೆ ಆಕ್ರೋಶ
ಗಾಯಾಳುಗಳನ್ನು ಕೂಡಲೇ ಶಿರಾಳಕೊಪ್ಪ ಮತ್ತು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲ್ಲೇಶಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು












