ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಯುವನಿಧಿ (Yuva Nidhi) ಯೋಜನೆಯ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕೆ.ಡಿ. ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಏ.13ರಂದು ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಏ.15ರಂದು ಹೊಸನಗರದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು, ಏ.16ರಂದು ಸೊರಬದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಏ.17ರಂದು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಏ.22ರಂದು ಭದ್ರಾವತಿಯ ಸರ್.ಎಂ.ವಿ ಕಾಲೇಜು ಹಾಗೂ ಏ.24 ರಂದು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯಾದ್ಯಂತ ಜಿಮ್ಗಳಲ್ಲಿ ತನಿಖೆಗೆ ಆಗ್ರಹ, ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ಪ್ರತಿಭಟನೆ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: