ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ಹುಲಿಕಲ್ ಘಾಟಿ (Hulikal Ghat) ರಸ್ತೆ ಕಾಮಗಾರಿ ವೇಳೆ ಘಟನೆ ಸಂಭವಿಸಿದೆ. ಹಲವು ಕಾರ್ಮಿಕರು ಗಾಯಗೊಂಡಿರುವ ಶಂಕೆ ಇದೆ.
ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ಘಟನೆಯಾಗಿದೆ. ಹೇರ್‌ಪಿನ್ ತಿರುವಿನಲ್ಲಿ ಮಣ್ಣು ಕುಸಿಯುತಿತ್ತು. ಈ ಹಿನ್ನೆಲೆ ರಸ್ತೆ ರಿಪೇರಿ ಕಾಮಗಾರಿ ನಡೆಸಲಾಗುತಿತ್ತು. ಇಂದು ಸಂಜೆ ಕಾರ್ಮಿಕರ ಮೇಲೆ ಮಣ್ಣು ಜಾರಿದೆ. ಮಣ್ಣಿನ ಅಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ಕುರಿತು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಮಣ್ಣಿನ ಅಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಇದನ್ನೂ ಓದಿ : ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು










