ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ (Hulikal Ghat) ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Shivamogga-Live-Number-1-Website

ಕಳೆದ ಮಳೆಗಾಲದಲ್ಲಿ ಈ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಸಂಚಾರ ಸುಗಮಗೊಳಿಸಲು ಇಲ್ಲಿ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು. ಆದರೆ ಗುರುವಾರ ತಳಪಾಯದ ಕೆಲಸ ನಿರ್ವಹಿಸುತ್ತಿದ್ದಾಗ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದಷ್ಟು ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ.

Hulikal-Ghat-Road-closed

ಪರ್ಯಾಯ ಮಾರ್ಗಗಳ ವಿವರ

ಹುಲಿಕಲ್‌ ಘಾಟಿಯ ಹೇರ್‌ಪಿನ್‌ ತಿರುವಿನಲ್ಲಿ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳುವವರೆಗೆ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಲು ಅಪರ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

  • ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ: ತೀರ್ಥಹಳ್ಳಿ – ರಾವೆ – ಕಾನುಗೋಡು – ನಗರ – ಕೊಲ್ಲೂರು ಮೂಲಕ ಕುಂದಾಪುರ ತಲುಪಬಹುದು.
  • ಯಡೂರು – ಮಾಸ್ತಿಕಟ್ಟೆ ಮಾರ್ಗ: ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ಕಾನುಗೋಡು – ನಗರ – ಕೊಲ್ಲೂರು ಮೂಲಕ ಸಂಚರಿಸಬಹುದು.
  • ಶಿವಮೊಗ್ಗ/ಸಾಗರದಿಂದ ಬರುವ ಭಾರಿ ವಾಹನಗಳಿಗೆ: ಶಿವಮೊಗ್ಗ – ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ತಲುಪಿ, ಅಲ್ಲಿಂದ ಭಟ್ಕಳ – ಬೈಂದೂರು ಮೂಲಕ ಕುಂದಾಪುರಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ.

ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 11, 2026

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

Leave a Comment