ಶಿವಮೊಗ್ಗ: ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್ -20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 12ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶಿವಪುರ ತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಹೊಸನಗರದ ಹಲವೆಡೆ ಕರೆಂಟ್ ಇರಲ್ಲ
ಹೊಸನಗರ: ಸಾಗರ- ಹೊಸನಗರ 33ಕೆವಿ ವಿದ್ಯುತ್ ಮಾರ್ಗದ ರೀಕಂಡಕ್ಟರಿಂಗ್ ಕಾರ್ ನಿರ್ವಹಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಏ.12ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಟಕಣೆ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಸನಗರ ಪಟ್ಟಣ, ಜೇನಿ, ಮಾರುತಿಪುರ, ರಾಮಚಂದ್ರಾಪುರ ಮಠ, ಮೇಲಿನಬೆಸಿಗೆ, ಸೊನಲೆ, ಎಂ. ಗುಡ್ಡೆಕೊಪ್ಪ, ಕರಿನಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ
ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ
ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಏ.15 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಆದ್ದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9448289454 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LATEST NEWS
About The Editor
ನಿತಿನ್ ಆರ್.ಕೈದೊಟ್ಲು














