ಶಿವಮೊಗ್ಗ: ಬೆಂಗಳೂರು-ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (Intercity Express) ರೈಲಿನಲ್ಲಿ ಪ್ರಯಾಣಿಕರೊಬ್ಬರ ಬ್ಯಾಗ್ ಕಳವು ಮಾಡಿದ್ದ ಆರೋಪಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (GRP) ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಬಂಧಿತನಿಂದ ₹3.60 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ.
ಮಾರ್ಚ್ 12 ಬೆಂಗಳೂರಿನ ನಿವಾಸಿ ಅಂಬಿಕಾ ಎಂಬುವವರು ತಮ್ಮ ಮಕ್ಕಳೊಂದಿಗೆ ಬೆಂಗಳೂರಿನಿಂದ ಆನಂದಪುರಂಗೆ (ರೈಲು ಸಂಖ್ಯೆ 20651) ಪ್ರಯಾಣಿಸುತ್ತಿದ್ದರು. Intercity Express ರೈಲು ರಾತ್ರಿ 8:15ಕ್ಕೆ ಕುಂಸಿ ನಿಲ್ದಾಣ ದಾಟಿದ ನಂತರ ಅಂಬಿಕಾ ಅವರಿಗೆ ತಮ್ಮ ಹ್ಯಾಂಡ್‌ಬ್ಯಾಗ್ ನಾಪತ್ತೆಯಾಗಿರುವುದು ಗೊತ್ತಾಗಿದೆ. ಅದರಲ್ಲಿ 35 ಗ್ರಾಂ ಚಿನ್ನಾಭರಣ ಮತ್ತು ₹10,000 ಸಾವಿರ ನಗದು ಇತ್ತು.
ತಕ್ಷಣ ಕಾರ್ಯಪ್ರವೃತ್ತರಾದ ರೈಲ್ವೆ ಪೊಲೀಸ್
ಇನ್ನು, ಘಟನೆ ಸಂಬಂಧ ಅಂಬಿಕಾ ಅವರು ದೂರು ನೀಡಿದ್ದರು. ಇದರ ಬೆನ್ನಿಗೆ ಶಿವಮೊಗ್ಗ ಆರ್‌ಪಿಎಫ್ ಮತ್ತು ಮೈಸೂರು ವಿಭಾಗದ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿದವು. ಕುಂಸಿ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಕಳ್ಳನ ಸುಳಿವು ಸಿಕ್ಕಿತು. ಅಲ್ಲಿಂದ ಸುಮಾರು 50 ಕಿ.ಮೀ ದೂರದ ಸಾಗರದವರೆಗೂ ಆರೋಪಿಯನ್ನು ಹಿಂಬಾಲಿಸಿದ ತಂಡಕ್ಕೆ, ಸಾಗರದ ಖಾಸಗಿ ಸಂಸ್ಥೆಯೊಂದರ ಸಿಸಿಟಿವಿ ದೃಶ್ಯಾವಳಿಗಳು ಪ್ರಮುಖ ಸಾಕ್ಷ್ಯ ಒದಗಿಸಿದವು ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ತಾಳಗುಪ್ಪದವರೆಗೆ ರೈಲು ವಿಸ್ತರಣೆ, ಸಂಸದರ ಮನವಿಗೆ ಮಿನಿಸ್ಟರ್ ಒಪ್ಪಿಗೆ, ಯಾವ ರೈಲು? ಯಾಕೆ?
ಆರೋಪಿಯನ್ನು ಬಂಧಿಸಿದ ಜೈಲಿಗಟ್ಟಿದರು
ತನಿಖೆ ನಡೆಸಿದ ರೈಲ್ವೆ ಪೊಲೀಸರು ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ದಾವಣಗೆರೆ ಜಿಲ್ಲೆಯ ಜಿ.ಎಸ್. ಪಟೇಲ್ (23) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ತಿಪಟೂರು, ದಾವಣಗೆರೆ ಮತ್ತು ಅರಸೀಕೆರೆ ರೈಲ್ವೆ ನಿಲ್ದಾಣಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಎರಡು ಜಾಮೀನು ರಹಿತ ವಾರಂಟ್‌ಗಳು ಬಾಕಿ ಇದ್ದವು. ಶಿವಮೊಗ್ಗ ನ್ಯಾಯಾಲಯವು ಆರೋಪಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

LATEST NEWS
- ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು









