ಶಿವಮೊಗ್ಗ: ನಗರದ ಟಿಪ್ಪುನಗರದಲ್ಲಿ ಅಕ್ರಮವಾಗಿ ಎಲ್ಪಿಜಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ದಾಳಿ (raid) ನಡೆಸಿದ್ದಾರೆ. ಶೆಡ್ ಒಂದರಲ್ಲಿ ಪರವಾನಗಿ ಇಲ್ಲದೆ ಸಿಲಿಂಡರ್ಗಳಿಂದ ಗ್ಯಾಸ್ ಸಂಗ್ರಹಿಸಿ, ಸಾರ್ವಜನಿಕರಿಗೆ ಮಾರಾಟ ಮಾಡಲು ಬೇರೆ ಸಿಲಿಂಡರ್ಗಳಿಗೆ ರಿಫಿಲ್ಲಿಂಗ್ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಸ್ಥಳದಲ್ಲಿ ಗ್ಯಾಸ್ ರಿಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಮೋಟಾರ್, ಹೋಸ್ ಪೈಪ್, ನಾಜಲ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ ವಿವಿಧ ಗಾತ್ರದ ನಾಲ್ಕು ಎಲ್ಪಿಜಿ ಸಿಲಿಂಡರ್ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿಯ ಸುಳಿವು ಅರಿತ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಆಹಾರ ಇಲಾಖೆಯ ನಿರೀಕ್ಷಕ ರಾಜಪ್ಪ ಎಸ್.ಪಿ. ಅವರು ನೀಡಿದ ದೂರಿನನ್ವಯ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ