ಮದುವೆ ಮನೆಯ ಊಟದ ಪಂಕ್ತಿಯಲ್ಲಿ ಗೃಹಿಣಿಯ ಸೋಂಟ ಮುಟ್ಟಿದ ಯುವಕ, ಗಲಾಟೆ

Published On : ಏಪ್ರಿಲ್ 16, 2026

Published By : ನಿತಿನ್‌ ಆರ್‌.ಕೈದೊಟ್ಲು 

ಸಾಗರ: ಮದುವೆ (wedding) ಸಮಾರಂಭವೊಂದರಲ್ಲಿ ಗೃಹಿಣಿಯೊಬ್ಬರ ಸೊಂಟ ಮುಟ್ಟಿದ ಪ್ರಕರಣ ತಾರಕಕ್ಕೇರಿ ಗಲಾಟೆಯಾಗಿದೆ.

ಮಹಿಳೆಯು ತನ್ನ ಸಹೋದರಿಯೊಂದಿಗೆ ಮದುವೆ ಸಮಾರಂಭದಲ್ಲಿ ರಾತ್ರಿ ಊಟಕ್ಕೆ ಪಂಕ್ತಿಯಲ್ಲಿ ಕುಳಿತಿದ್ದರು. ಹಿಂದಿನ ಸಾಲಿನಲ್ಲಿ ಕುಳಿತಿದ್ದ ಯುವಕನೊಬ್ಬ ಗೃಹಿಣಿಯ ಸಹೋದರಿಯನ್ನು ಚುಡಾಯಿಸಿದ್ದಾನೆ. ಬಳಿಕ ಆಕೆಯ ಮೈ ಮುಟ್ಟಿದ್ದಾನೆ. ವಿಷಯ ತಿಳಿದು ಗೃಹಿಣಿಯು ಯುವಕನಿಗೆ ಬೈದಿದ್ದಾರೆ. ಆಗ ಯುವಕ ಗೃಹಿಣಿಯ ಸೊಂಟ ಮುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಮೇಯಲು ಹೋಗಿದ್ದು 3 ಹಸು, ವಾಪಾಸ್ಸಾಗಿದ್ದು ಒಂದೇ, ರಾತ್ರಿ ಮನೆಯಿಂದ ಅದೂ ನಾಪತ್ತೆ, ಆಗಿದ್ದೇನು?

ಈ ವೇಳೆ ಗೃಹಿಣಿಯು ಕಿರುಚಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಗೆ ವಿಷಯ ತಿಳಿಸಿದ್ದಾರೆ. ಪಕ್ಕದಲ್ಲಿದ್ದ ವ್ಯಕ್ತಿಯು ಹಿಂದಿನ ಸಾಲಿನಲ್ಲಿ ಕುಳಿತಿದ್ದ ಯುವಕನನ್ನು ಪ್ರಶ್ನೆ ಮಾಡಿದ್ದಾರೆ. ಆಗ ಯುವಕ ಮತ್ತಿತರರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಪಾದಿಸಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 16, 2026

Leave a Comment