ಶಿವಮೊಗ್ಗದಲ್ಲಿ ಪ್ರತಿಷ್ಠಿತ ಕಂಪನಿಗಳಿಂದ ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು? ಏನೆಲ್ಲ ದಾಖಲೆ ಬೇಕು?

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.18 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು (Direct Recruitment) ಆಯೋಜಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಫಿನ್‌ಕಾರ್ಪ್ ಮತ್ತು ಎ.ಯು.ಸ್ಮಾಲ್ ಫೈನಾನ್ಸ್ ಬ್ಯಾಂಕ್ ಕಂಪನಿಗಳು ಭಾಗವಹಿಸಲಿವೆ. ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga-Job-Update

ಇದನ್ನೂ ಓದಿ : ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606 /  9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment