ಸಾಗರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ದೂರು ನೀಡಲು ಬಂದಾಗ ಸ್ಪಂದಿಸದ ಪೊಲೀಸರ ಕ್ರಮ ಖಂಡಿಸಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸಾಗರ ಪೊಲೀಸ್ ಠಾಣೆಯ (Police Station) ಮುಂದೆ ಪ್ರತಿಭಟನೆ ನಡೆಸಿದರು. (ಈ ಸುದ್ದಿಯನ್ನು ಇನ್ನು 52 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನಗರದ ಸಿಗಂದೂರು ರಸ್ತೆಯಲ್ಲಿ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಹುಲಿಮನೆ ಗ್ರಾಮದ ನಿವಾಸಿ ಲಕ್ಷ್ಮಣ (65) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ದೂರು ದಾಖಲಿಸಲು ಮೃತರ ಕುಟುಂಬಸ್ಥರು ಠಾಣೆಗೆ ಆಗಮಿಸಿದಾಗ, ಪೊಲೀಸರು ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಳಂಬ ಧೋರಣೆ ಅನುಸರಿಸಿದ್ದಾರೆ ಎಂದು ಆರೋಪಿಸಲಾಗಿದೆ.


ದೂರು ಸ್ವೀಕರಿಸಲು ಪೊಲೀಸರು ಉದಾಸೀನತೆ ತೋರಿದ್ದಾರೆ. ವಿಳಂಬದ ಬಗ್ಗೆ ಪ್ರಶ್ನಿಸಿದ್ದಕ್ಕೆ ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಅವರು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಹಕ್ರೆ ಗಂಭೀರ ಆರೋಪ ಮಾಡಿದ್ದು, ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಾದೆ ಎಂದು ಎಎಸ್ಪಿ ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಟ್ಟರು.
ಇದನ್ನೂ ಓದಿ : ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು
ಧರಣಿಯಲ್ಲಿ ಚಂದ್ರು ಹುಲಿಮನೆ, ವಿರೂಪಾಕ್ಷ, ಅರುಣ ಪೂಜಾರಿ, ಮಾಪು ಇಕ್ಕೇರಿ ಸೇರಿದಂತೆ ಹಲವರು ಭಾಗವಹಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು.