ಭದ್ರಾವತಿ: ರಸ್ತೆಯಲ್ಲಿ ದಿಢೀರ್ ಅಂಡ ಬಂದ ಪ್ರಾಣಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ (road accident) ಬಿದ್ದ ಪರಿಣಾಮ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ತಮ್ಮಡಿಹಳ್ಳಿ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.
ಗಾಯಗೊಂಡವರನ್ನು ರಮೇಶ.ವೈ ಎಂದು ಗುರುತಿಸಲಾಗಿದೆ. ಸದ್ಯ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗದ ಹರ್ಷ ದಿ ಫರ್ನ್ ಹೊಟೇಲ್ನಲ್ಲಿ ಐಟಿ ಮ್ಯಾನೇಜರ್ ಆಗಿರುವ ರಮೇಶ ಅವರು ಕೆಲಸ ಮುಗಿಸಿಕೊಂಡು ರಾತ್ರಿ 7:30ಕ್ಕೆ ಶಂಕರಘಟ್ಟದಲ್ಲಿರುವ ಮನೆಗೆ ಮರಳುತ್ತಿದ್ದರು. ಈ ವೇಳೆ ರಸ್ತೆಗೆ ಪ್ರಾಣಿಯೊಂದು ರಸ್ತೆಗೆ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಬೈಕಿನಿಂದ ಕೆಳಕ್ಕೆ ಬಿದ್ದ ರಮೇಶ್ ಅವರ ತಲೆಯ ಎಡಭಾಗಕ್ಕೆ ಜೋರಾಗಿ ಪೆಟ್ಟು ಬಿದ್ದಿದ್ದು, ಕಿವಿಯಿಂದ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ