ಶಿವಮೊಗ್ಗ ಸಿಟಿಯ ವಿವಿಧೆಡೆ ಏಪ್ರಿಲ್‌ 18ರಂದ ಕರೆಂಟ್‌ ಇರಲ್ಲ

Published On : ಏಪ್ರಿಲ್ 17, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಏ.18 ರಂದು ಅಂಬೇಡ್ಕರ್ ಭವನದಿಂದ ಮಲ್ಟಿಲೆವಲ್ ಕಾರ್ ಪಾರ್ಕಿಂಗ್‌ವರೆಗೆ ಕಂಬ ತೆರವುಗೊಳಿಸುವ ಕಾಮಗಾರಿ ನಡೆಸಲಾಗುತ್ತಿದೆ. ‘ಆದ್ದರಿಂದ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut)ʼ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

MESCOM-Shimoga-Office

ಕಸ್ತೂರಬಾ ರಸ್ತೆ, ಮಹಾನಗರ ಪಾಲಿಕೆ, ವೀರಶೈವ ಕಲ್ಯಾಣ ಮಂಟಪ ಹತ್ತಿರ, ಅಂಬೇಡ್ಕರ್ ರಸ್ತೆ, ನೆಹರು ರಸ್ತೆ, ಬಸವ ಸದನ ಹತ್ತಿರ, ಕಲ್ಯಾಣ್‌ ಜ್ಯುವೆಲರಿ, ವೆಂಕಟೇಶ್ವರ ಸ್ವೀಟ್ ಹೌಸ್, ಶಿವಪ್ಪ ನಾಯಕ ಸರ್ಕಲ್, ಹೂ ಮಾರುಕಟ್ಟೆ, ಗಾಂಧಿಪಾರ್ಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಶಿವಮೊಗ್ಗದ ಒಂದು ರೈಲಿನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ, ರೈಲ್ವೆ ಇಲಾಖೆ ಪ್ರಕಟಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 17, 2026

Leave a Comment