ಶಿವಮೊಗ್ಗ: ವಿಮಾನ ನಿಲ್ದಾಣದಿಂದ ಹೈದರಾಬಾದ್ಗೆ ತೆರಳಬೇಕಿದ್ದ ಸ್ಪೈಸ್ಜೆಟ್ ವಿಮಾನವು (flight) ತಾಂತ್ರಿಕ ಕಾರಣಗಳಿಂದಾಗಿ ಹಠಾತ್ತಾಗಿ ರದ್ದಾಗಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು.
ವಿಮಾನ ಹಾರಾಟದ ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರಿಗೆ, ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷದ ನೆಪವೊಡ್ಡಿ ಪ್ರಯಾಣ ರದ್ದುಗೊಳಿಸಿರುವ ಮಾಹಿತಿ ನೀಡಲಾಯಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪೂಜಾ ಕಾರ್ಯಕ್ರಮಕ್ಕೆ ಅಡ್ಡಿ
ಹೈದರಾಬಾದ್ನಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಉಡುಪಿಯಿಂದ ಆಗಮಿಸಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ರದ್ದತಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದರು. “ವಿಮಾನ ರದ್ದಾಗುವ ಕುರಿತು ಮೊದಲೇ ಮಾಹಿತಿ ನೀಡಬೇಕಿತ್ತು. ವಿಮಾನ ನಿಲ್ದಾಣಕ್ಕೆ ಬಂದ ನಂತರ ವಿಷಯ ತಿಳಿಸಿರುವುದು ಸರಿಯಲ್ಲ” ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ