ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆಗೆ ನಿರ್ಬಂಧ ವಿಧಿಸುವಂತೆ ಆಗ್ರಹ

Published On : ಏಪ್ರಿಲ್ 17, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರದಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 18 ರಂದು ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣಕ್ಕೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಜಿಲ್ಲಾ ಸಮಿತಿಯು ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರಿಗೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ : ‘ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಸಿದ್ದರಾಮಯ್ಯ ರಾಜ್ಯದ ಕ್ಷಮೆಯಾಚಿಸಬೇಕುʼ

‘ನಗರದ ಕುವೆಂಪು ರಂಗಮಂದಿರದಲ್ಲಿ ಏಪ್ರಿಲ್ 18ರ ಸಂಜೆ “ನಾನೇ ಭಾರತ್” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣಗಳಿವೆ. ಕೆಲವು ಜಿಲ್ಲೆಗಳಲ್ಲಿ ಅವರ ಭಾಷಣಕ್ಕೆ ನಿರ್ಬಂಧವನ್ನೂ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವರಿಗೆ ಭಾಷಣ ಮಾಡಲು ಅವಕಾಶ ನೀಡಬಾರದುʼ ಎಂದು ಎಸ್‌ಡಿಪಿಐ ಮುಖಂಡರು ಒತ್ತಾಯಿಸಿದ್ದಾರೆ.

SDPI-Memorandum-against-Chakaravarthi-Sulibele-to-Shimoga-SP-Nikhil.

ಈ ಸಂದರ್ಭ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಜೀಲಾನ್ ರಜಾ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಮ್ರಾನ್, ಜಮೀರ್, ಸಮಿತಿ ಸದಸ್ಯರಾದ ಕಲೀಂ, ಇಸಾಖ್, ಶಿವಮೊಗ್ಗ ನಗರ ಕಾರ್ಯದರ್ಶಿ ಸಜೀಲ್ ಹಾಗೂ ಹಬೀಬ್ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 17, 2026

Leave a Comment