ಐದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌, ಜೈಲಿಗೆ

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ (absconding) ಆರೋಪಿಯನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಭದ್ರಾವತಿ ಬೊಮ್ಮನಕಟ್ಟೆಯ ಹುಸೇನ್ ಪಾಶಾ (48) ಎಂಬಾತನ ವಿರುದ್ದ ಮೂರನೇ ಜೆಎಂಎಫ್ ನ್ಯಾಯಾಲಯ ವಾರೆಂಟ್ ಹೊರಡಿಸಿತ್ತು. ಗ್ರಾಮಾಂತರ ಠಾಣೆ ಪಿಐ ರಾಘವೇಂದ್ರ ಕಾಂಡಿಕೆ, ಸಿಬ್ಬಂದಿ ದಿವಾಕರ್, ವಿರೇಶ್ ಅವರ ತಂಡ ಆರೋಪಿಯನ್ನುವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನದಲ್ಲಿರಿಸಿ ಆದೇಶಿಸಿದೆ.

ಇದನ್ನೂ ಓದಿ : ಆರು ವರ್ಷದ ಬಳಿಕ ಶಿವಮೊಗ್ಗದಲ್ಲಿ ವ್ಯಕ್ತಿ ಅರೆಸ್ಟ್‌, ಜೈಲುಪಾಲು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment