ಕುಡಿಯುವ ನೀರಿನ ಬಾವಿಗೆ ವಿಷ, ದಾಖಲಾಯ್ತು ಪ್ರಕರಣ

ತೀರ್ಥಹಳ್ಳಿ: ತಾಲೂಕಿನ ಗಿಣಿಯ ಗ್ರಾಮದಲ್ಲಿ ಹಳೆಯ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ (water) ಬಾವಿಗೆ ವಿಷ ಬೆರೆಸಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರ ಜಮೀನಿನ ಬಾವಿಗೆ ವಿಷ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಮಂಗಳವಾರ ಸಂಜೆ ರಾಘವೇಂದ್ರ ಅವರು ಬಾವಿಯ ಬಳಿ ಹೋಗಿದ್ದಾಗ, ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಜಮೀನು ವಿವಾದದ ಹಿನ್ನೆಲೆ ವಿಷ ಬೆರೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga-Police-Jeep

ಇದನ್ನೂ ಓದಿ : ಐದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌, ಜೈಲಿಗೆ

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment