ನಕಲಿ ಪಿ.ಹೆಚ್.ಡಿ: ಅತಿಥಿ ಉಪನ್ಯಾಸಕ ಸೇವೆಯಿಂದ ಬಿಡುಗಡೆ

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿಕಾರಿಪುರ: ನಕಲಿ ಪಿ.ಹೆಚ್.ಡಿ ಪ್ರಮಾಣಪತ್ರ ನೀಡಿ ಶಿಕಾರಿಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕ (guest lecturer) ಮಾದೇಶ ಪ್ರಭು ಅವರನ್ನು ಶುಕ್ರವಾರ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ : ಕುಮದ್ವತಿ ಕಾಲೇಜು ಮುಂದೆ ಬಸ್‌ ಪಲ್ಟಿ ಪ್ರಕರಣ, ಚಾಲಕನಿಗೆ ಸಂಕಷ್ಟ

ಮಾದೇಶ ಪ್ರಭು ಅವರು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿದ್ದರು. 2015ರಲ್ಲಿ ಉತ್ತರ ಪ್ರದೇಶದ ಝಾನ್ಸಿಯ ಬುಂದೇಲ್‌ಖಂಡ ವಿಶ್ವವಿದ್ಯಾಲಯದಲ್ಲಿ ಪಿ.ಹೆಚ್.ಡಿ ಪೂರ್ಣಗೊಳಿಸಿರುವುದಾಗಿ ಪ್ರಮಾಣಪತ್ರ ಸಲ್ಲಿಸಿದ್ದರು. ಪದವಿ ಪ್ರಮಾಣಪತ್ರದ ನೈಜತೆ ಪರಿಶೀಲನೆಗೆ ಸರ್ಕಾರ ಸುತ್ತೋಲೆ ಹೊರಡಿಸಿದ ಕಾರಣಕ್ಕೆ ಕಾಲೇಜು ಮಟ್ಟದ ಪರಿಶೀಲನಾ ಸಮಿತಿಯು ವಿಶ್ವವಿದ್ಯಾಲಯದ ಜತೆ ಸಂವಹನ ನಡೆಸಿತ್ತು. ಅಲ್ಲಿನ ವಿ.ವಿಯಿಂದ ಮಾದೇಶ ಪ್ರಭು ಅವರು ಪಿ.ಹೆಚ್.ಡಿ ಪಡೆದಿಲ್ಲ ಎನ್ನುವುದು ದೃಢಪಟ್ಟಿತು. ಆದ್ದರಿಂದ ಸಭೆ ನಡೆಸಿದ ಸಮಿತಿ, ಅವರನ್ನು ಸೇವೆಯಿಂದ ಬಿಡುಗಡೆ ಮಾಡಿದೆ.

“ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶಪ್ರಭು ಸಲ್ಲಿಸಿರುವ ಪಿಎಚ್.ಡಿ ಪದವಿ ಪ್ರಮಾಣ ಪತ್ರ ನಕಲಿಯಾಗಿದೆ ಎನ್ನುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಚನ್ನೇಶ್‌ ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment