ತೀರ್ಥಹಳ್ಳಿ:ತಾಲೂಕಿನ ಕೆರೋಡಿ ತೂದೂರು ಗ್ರಾಮದ ಮನೆಯೊಂದರ ಬೀಗ ಮುರಿದು ಸುಮಾರು ₹25 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣ ಕಳ್ಳತನ (massive burglary) ಮಾಡಿರುವ ಘಟನೆ ನಡೆದಿದೆ. ಅರ್ಪಿತಾ ಎಂಬುವವರ ತವರು ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಮನೆಯವರು ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭ ಕಳ್ಳತನವಾಗಿದೆ.
ಅರ್ಪಿತಾ ಅವರು ಮಗನೊಂದಿಗೆ ತವರು ಮನೆಗೆ ಬಂದಿದ್ದರು. ಏಪ್ರಿಲ್ 15ರಂದು ಮನೆಯವರೆಲ್ಲರೂ ಬೀಗ ಹಾಕಿಕೊಂಡು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಮರುದಿನ ಬೆಳಗ್ಗೆ ಪಕ್ಕದ ಮನೆಯವರು ಫೋನ್ ಕರೆ ಮಾಡಿ ಮನೆಯ ಬಾಗಿಲು ತೆರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅರ್ಪಿತಾ ಅವರು ಬಂದು ನೋಡಿದಾಗ ಕಳ್ಳರು ಮುಂಭಾಗದ ಬಾಗಿಲಿನ ಲಾಕ್ ಕಟ್ ಮಾಡಿ ಒಳನುಗ್ಗಿದ್ದಾರೆ ಎಂದು ಆರೋಪಿಸಲಾಗಿದೆ.
ಮನೆಯೊಳಗಿದ್ದ ಬೀರುವಿನ ಬೀಗ ಒಡೆದ ಕಳ್ಳರು, ಅದರಲ್ಲಿದ್ದ ಹಾರಗಳು, ತಾಳಿಸರ, ನೆಕ್ಲೆಸ್, ಬಳೆಗಳು ಹಾಗೂ ಉಂಗುರಗಳು ಸೇರಿದಂತೆ ಒಟ್ಟು 226 ಗ್ರಾಂ ಚಿನ್ನದ ಆಭರಣಗಳನ್ನು ದೋಚಿದ್ದಾರೆ. ಇದರೊಂದಿಗೆ ಬೆಳ್ಳಿಯ ಸಾಮಗ್ರಿಗಳನ್ನು ಕೂಡ ಕದ್ದೊಯ್ದಿದ್ದಾರೆ. ಇವುಗಳ ಒಟ್ಟು ಮೌಲ್ಯ ₹25,11,000 ಎಂದು ಅಂದಾಜಿಸಲಾಗಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ