ಕುಟುಂಬದವರೆಲ್ಲ ಕಾರ್ಯಕ್ರಮಕ್ಕೆ ಹೋದಾಗ ಮನೆ ಬಾಗಿಲಿನ ಬೀಗ ಒಡೆದ ಕಳ್ಳರು

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿರಾಳಕೊಪ್ಪ: ತಡಗಣಿ ಗೇಟ್‌ನಲ್ಲಿರುವ ಮನೆಯೊಂದರ (house) ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯವರು ಊರಿಗೆ ಹೋದ ಸಂದರ್ಭ ಕೃತ್ಯ ನಡೆದಿದೆ.

ಇದನ್ನೂ ಓದಿ : ಪಾರ್ಟಿ ವೇಳೆ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

ನಾಗರಾಜ ಅವರು ತಮ್ಮ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಪತ್ನಿ ಮತ್ತು ಮಕ್ಕಳೊಂದಿಗೆ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದರು. ಮರುದಿನ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ.

Shiralakoppa-Police-Station-in-Shivamogga-

ಮನೆಯೊಳಗಿದ್ದ ಎರಡು ಬೀರುಗಳನ್ನು ಜಾಲಾಡಿದ ಕಳ್ಳರು, ಅದರಲ್ಲಿದ್ದ ಸುಮಾರು 1 ಕೆಜಿ 20 ಗ್ರಾಂ ತೂಕದ ಬೆಳ್ಳಿ ಆಭರಣ ಹಾಗೂ 13 ಗ್ರಾಂ ತೂಕದ ಚಿನ್ನದ ಆಭರಣ ದೋಚಿದ್ದಾರೆ. ಕಳುವಾದ ಒಟ್ಟು ಆಭರಣಗಳ ಅಂದಾಜು ಮೌಲ್ಯ ₹2,31,000 ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment