ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 13 ಅಕ್ಟೋಬರ್ 2019
ರವೀಂದ್ರನಗರ ಗಣಪತಿ ದೇವಸ್ಥಾದನಲ್ಲಿ ನಡೆಯುತ್ತಿರುವ ಶತ ಚಂಡಿಕಾ ಹೋಮದಲ್ಲಿ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಳಿತಾಗಲಿ ಎಂದು ಹೋಮ ನಡೆಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗ್ಗೆಯಿಂದ ಹೋಮ ನಡೆಯುತ್ತಿದ್ದು, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಸಿಗಲಿ, ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಆಗಲಿ ಎಂಬ ಉದ್ದೇಶದಿಂದ ಶತ ಚಂಡಿಕಾ ಹೋಮ ನಡೆಸಲಾಗುತ್ತಿದೆ.
ರವೀಂದ್ರ ನಗರ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಆ.ಪ.ರಾಮಭಟ್ಟ ಅವರ ನೇತೃತ್ವದಲ್ಲಿ ಹೋಮ ನಡೆಯುತ್ತಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]