ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019
ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಒಬ್ಬರು ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದಿನಂತೆ ಬೆಳಗ್ಗೆ ಬ್ಯಾಂಕಿಗೆ ಹೋಗಿದ್ದ ಮ್ಯಾನೇಜರ್ ಸ್ವಲ್ಪ ಸಮಯದ ಬಳಿಕ ಮನೆಗೆ ಹಿಂತಿರುಗಿ, ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾದ ಜೋಗ್ ಫಾಲ್ಸ್ ಶಾಖೆಯ ಡೆಪ್ಯೂಟಿ ಮ್ಯಾನೇಜರ್ ಅನಿಲ್ ಕುಮಾರ್ (30) ಆತ್ಮಹತ್ಯೆಗೆ ಶರಣಾದವರು. ಪತ್ನಿಯನ್ನು ಹೊರಗೆ ಕಳುಹಿಸಿ ಅನಿಲ್ ಕುಮಾರ್ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಎರಡು ದಿನದಿಂದ ಅನಿಲ್ ಕುಮಾರ್ ಅವರು ರಜೆಯಲ್ಲಿದ್ದರು. ಇವತ್ತು ಬೆಳಗ್ಗೆ ಬ್ಯಾಂಕಿಗೆ ತೆರಳಿದ್ದ ಅವರು ಸ್ವಲ್ಪ ಸಮಯದ ಬಳಿಕ ಮನೆಗೆ ಮರಳಿದ್ದಾರೆ. ಕೆಲಸದ ಒತ್ತಡವೆ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಜೋಗ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]