ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 20 ಅಕ್ಟೋಬರ್ 2019
ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ರೌಡಿಗಳ ಪರೇಡೆ ನಡೆಸಲಾಯಿತು. ವಿವಿಧ ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವವರು ಪರೇಡ್’ನಲ್ಲಿ ಭಾಗವಹಿಸಿದ್ದರು. ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸರು ಖಡಕ್ ವಾರ್ನಿಂಗ್ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಶಿವಮೊಗ್ಗ ಉಪ ವಿಭಾಗದ ವಿವಿಧ ಪೊಲೀಸ್ ಠಾಣೆಗಳ 300ಕ್ಕೂ ಹೆಚ್ಚು ರೌಡಿಗಳು ಪರೇಡ್’ನಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ರೌಡಿ ಚಟುವಟಿಕೆಯಲ್ಲಿ ತೊಡಗಿರುವವರು ತಮ್ಮನ್ನು ತಾವೆ ಸುಧಾರಿಸಿಕೊಳ್ಳಬೇಕು. ಇದನ್ನು ಬಿಟ್ಟು ಅಪರಾಧ ಚಟುವಟಿಕೆಯಲ್ಲಿ ತೊಡಗುವುದು, ಹುಡುಗರನ್ನು ಬಿಟ್ಟು ಅಪರಾಧ ಚಟುವಟಿಕೆ ನಡೆಸುವುದು ಮಾಡುವದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಇನ್ನು, ಯಾವುದೆ ಸಿವಿಲ್ ವಿವಾದಗಳಲ್ಲಿ ಭಾಗಿಯಾದರೆ ಕ್ರಮ ನಿಶ್ಚಿತ ಎಂದು ವಾರ್ನಿಂಗ್ ನೀಡಿದರು.
ಇದೇ ವೇಳೆ ಮಾತನಾಡಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್, ಸನ್ನಡತೆ ಆಧಾರದ ಮೇಲೆ ರೌಡಿ ಶೀಟ್ ಕ್ಲೋಸ್ ಮಾಡಲು ಪೊಲೀಸ್ ಇಲಾಖೆ ಯೋಚಿಸಿದೆ. ಇದರ ಹೊರತಾಗಿಯು ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸಿದರೆ ಪ್ರಕರಣ ದಾಖಲು ಮಾಡುವುದರ ಜೊತೆಗೆ ಗೂಂಡಾ ಕಾಯ್ದೆ, ಗಡಿಪಾರು ಮಾಡುವಂತಹ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಡಿವೈಎಸ್’ಪಿ ಉಮೇಶ್ ನಾಯ್ಕ್, ವಿವಿಧ ಠಾಣೆಯ ಇನ್ಸ್’ಪೆಕ್ಟರ್, ಸಬ್’ಇನ್ಸ್’ಪೆಕ್ಟರ್’ಗಳು, ಸಿಬ್ಬಂದಿಗಳು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]