ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 21 ಅಕ್ಟೋಬರ್ 2019

ಶಿವಮೊಗ್ಗ ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ. ಚರಂಡಿಗಳು ತುಂಬಿ ಹರಿದಿದ್ದು, ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಮಂಡ್ಲಿಯಲ್ಲಿ ರಾಜಕಾಲುವೆ ನೀರು ರಸ್ತೆ ಮತ್ತು ಮನೆಗಳಿಗೆ ನುಗ್ಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದರಿಂದ ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇದರಿಂದ ಬೆಳಗ್ಗೆ ಭಾರಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಜನರು ಸಂಕಷ್ಟ ಅನುಭವಿಸಬೇಕಾಯಿತು.
ಇನ್ನ, ಮಂಡ್ಲಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ತುಂಬಿದ್ದರಿಂದ ಮಳೆ ಪ್ರಮಾಣ ಹೆಚ್ಚಾದಂತೆ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಮನೆಯೊಳಗೆ ಇದ್ದ ವಸ್ತುಗಳು ಕೊಳಚೆ ನೀರಿನಿಂದ ಹಾನಿಯಾಗಿದೆ.
ರಾಜಕಾಲುವೆ ಸ್ವಚ್ಛ ಮಾಡದೆ, ಚರಂಡಿಗಳನ್ನು ಕ್ಲೀನ್ ಮಾಡಿಸದೆ ಇರುವುದೆ ಮಳೆನೀರು ಮನೆಗಳಿಗೆ ನುಗ್ಗಲು ಕಾರಣ ಎಂದು ಮಂಡ್ಲಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಾಲಿಕೆ ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಅವರ ವಿರುದ್ಧ ಜನರು ಆಕ್ರೋಶಗೊಂಡವರು. ಈ ವೇಳೆ, ಚರಂಡಿ ಕ್ಲೀನ್ ಮಾಡಿಸುವುದಾಗಿ ಉಪಮೇಯರ್ ಭರವಸೆ ನೀಡಿದರು.
ಕೂಡಲೆ ಮಹಾನಗರ ಪಾಲಿಕೆ ಜೆಸಿಬಿ ಮತ್ತು ಎಂಜಿನಿಯರ್’ಗಳು ಸ್ಥಳಕ್ಕೆ ಆಗಮಿಸಿದ್ದು, ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





