ಶಿವಮೊಗ್ಗ ಲೈವ್.ಕಾಂ | THIRTHAHALLI | 23 ಅಕ್ಟೋಬರ್ 2019
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ವೈಫಲ್ಯ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅ.25ಕ್ಕೆ ಆಗುಂಬೆಯಿಂದ ಮೇಗರವಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಆ ದಿನ ಬೆಳಗ್ಗೆ 8 ಗಂಟೆಗೆ ಮಾಜಿ ಶಾಸಕ ಕಡಿದಾಳು ದಿವಾಕರ್ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಡುಕೋಣ, ಮಂಗಗಳು, ಕಾಡಾನೆ ಸೇರಿದಂತೆ ಕಾಡುಪ್ರಾಣಿಗಳ ಉಪಟಳದಿಂದ ರೈತರು ಕಂಗೆಟ್ಟು ಹೋಗಿದ್ದಾರೆ. ಈ ನಡುವೆ ಅತಿವೃಷ್ಟಿಯಿಂದಾಗಿ ಇನ್ನಷ್ಟು ಸಮಸ್ಯೆ ಅನುಭವಿಸುವಂತಾಗಿದೆ. ಆದರೆ ಈವರೆಗು ಆಗುಂಬೆ ಭಾಗದಲ್ಲಿ ನೆರೆ ಪರಿಹಾರ ಸೇರಿದಂತೆ ಯಾವುದೆ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಇದನ್ನು ವಿರೋಧಿಸಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಕೆಸ್ತೂರು ಮಂಜುನಾಥ್, ಬಾಳೇಹಳ್ಳಿ ಪ್ರಭಾಕರ್, ಡಿ.ಲಕ್ಷ್ಮಣ್, ಹಾರೋಗುಳಿಗೆ ಪದ್ಮನಾಭ, ಹಸಿರುಮನೆ ಮಹಾಬಲೇಶ, ಜಯಪ್ರಕಾಶ್ ಶೆಟ್ಟಿ, ವೀರಾ ಗಿರೀಶ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]